ಕ್ರೈಮ್

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಪತಿ, ಅತ್ತೆಗೆ ಶಿಕ್ಷೆ

ಬೀದರ್: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ರುಜುವಾತಾದ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಹಾಗೂ ಅತ್ತೆಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಲತಾ ಗುಣವಂತ ಸಾವಿಗೆ ಔರಾದ್‌ ತಾಲ್ಲೂಕಿನ ಕರಕ್ಯಾಳ ಗ್ರಾಮದ ಗುಣವಂತ ಕಾಶಿರಾಮ ಜಾಧವ, ಇವರ ತಾಯಿ ಭಾಗುಬಾಯಿ ಕಾಶಿರಾಮ ಜಾಧವ ಕಾರಣ ಎಂಬುದು ವಿಚಾರಣೆಯಿಂದ ಸಾಬೀತಾಗಿದೆ.

ಗುಣವಂತಗೆ 6 ವರ್ಷ ಸಾದಾ ಶಿಕ್ಷೆ, ಭಾಗುಬಾಯಿಗೆ 3 ವರ್ಷ ಸಾದಾ ಶಿಕ್ಷೆ. ಇಬ್ಬರಿಗೂ ತಲಾ ₹5 ಸಾವಿರ ದಂಡ ವಿಧಿಸಲಾಗಿದೆ. ದಂಡ ಭರಿಸದಿದ್ದಲ್ಲಿ 5 ತಿಂಗಳು ಹೆಚ್ಚಿನ ಸಾದಾ ಶಿಕ್ಷೆ ವಿಧಿಸತಕ್ಕದು ಎಂದು ನ್ಯಾಯಾಧೀಶ ಸಚಿನ್‌ ಕೌಶಿಕ್‌ ಆರ್‌.ಎನ್‌. ಅವರು ಬುಧವಾರ ತಮ್ಮ ತೀರ್ಪಿನಲ್ಲಿ ತಿಳಿಸಿದ್ಧಾರೆ.

‘ನೀನು ನೋಡಲು ಸರಿ ಇಲ್ಲ, ಚೆನ್ನಾಗಿ ಕೆಲಸ ಮಾಡುವುದಿಲ್ಲ. ಮದುವೆ ಸಂದರ್ಭದಲ್ಲಿ ತವರು ಮನೆಯಿಂದ ಹಣ ತೆಗೆದುಕೊಂಡು ಬಂದಿಲ್ಲ. ಹಣ ತೆಗೆದುಕೊಂಡು ಬರದಿದ್ದರೆ ಮಗನಿಗೆ ಇನ್ನೊಂದು ಮದುವೆ ಮಾಡುತ್ತೇವೆ’ ಎಂದು ಅತ್ತೆ ಭಾಗುಬಾಯಿ, ಲತಾಗೆ ಕಿರುಕುಳ ಕೊಟ್ಟಿದ್ದಾರೆ. ಲತಾ ತವರು ಮನೆಯವರಿಗೆ ಘಟನೆ ಕುರಿತು ವಿವರಿಸಿದ್ದಾಳೆ.

ಅವರು ₹50 ಸಾವಿರ ಕೊಟ್ಟು ಕಳಿಸಿದ್ದಾರೆ. ಇದಾದ ನಂತರವೂ ಮೊದಲಿನಂತೆ ಕಿರುಕುಳ ಕೊಡಲು ಆರಂಭಿಸಿದ್ದಾರೆ. ಇದರಿಂದ ಬೇಸತ್ತ ಲತಾ 2016ರ ಸೆಪ್ಟೆಂಬರ್‌ 19ರಂದು ಕರಕ್ಯಾಳ ಗ್ರಾಮದ ನಾಗನಾಥ ಭಾಲೂರೆ ಅವರ ಹೊಲದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ವಕೀಲ ಶರಣಗೌಡ ವಾದ ಮಂಡಿಸಿದ್ದರು.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Ashika S

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

16 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

44 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago