ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕೇರಳದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕ್ರಿಶ್ಚಿಯನ್ನರನ್ನು ಗುರಿಯಾಗಿಸಿ ದಾಳಿ ನಡೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಕಣ್ಣು ಮುಚ್ಚಿ ಪ್ರಾರ್ಥಿಸುವ ಸಮಯದಲ್ಲಿಯೇ ಸ್ಫೋಟ ಸಂಭವಿಸಿದೆ, ಸಾಕಷ್ಟು ಮಂದಿಗೆ ಏನು ನಡೆಯುತ್ತಿದೆ ಎಂದು ಅರ್ಥ ಮಾಡಿಕೊಳ್ಳಲು ಸಮಯವೇ ಸಿಕ್ಕಿಲ್ಲ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಪೋಟಕ್ಕೆ ಸಂಬಂಧಿಸಿದಂತೆ ಸರ್ಕಾರ ವಿವರಗಳನ್ನು ಸಂಗ್ರಹಿಸುತ್ತಿದೆ, ಇದೊಂದು ದುರದೃಷ್ಟಕರ ಘಟನೆ, ಎಲ್ಲಾ ಉನ್ನತ ಅಧಿಕಾರಿಗಳು ಎರ್ನಾಕುಲಂಗೆ ತಲುಪಿದ್ದಾರೆ,