ಬೆಳ್ತಂಗಡಿ: ಅಪ್ರಾಪ್ರ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೇಶವ(43) ಬಂಧಿತ ಆರೋಪಿ. ಬಾಲಕಿಗೆ ಆರೋಪಿ ಪರಿಚಿತನೇ ಆಗಿದ್ದು, ಆಗಾಗ್ಗೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಈ ಬಗ್ಗೆ ಬಾಲಕಿ ತಾಯಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.