ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊರಮ್ಮನ ಕ್ಯಾಂಪ್ ಬಳಿ ಆಂಜನೇಯ ದರ್ಶನಕ್ಕಾಗಿ ಅಂಜನಾದ್ರಿಗೆ ಬಂದು ವಾಪಸ್ ಆಗುತ್ತಿದ್ದ ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ ನಡೆದಿದೆ.
ಗಲಾಟೆ ವೇಳೆ ಬಸ್ಗಳಿಗೆ ಕಲ್ಲು ತೂರಲಾಗಿದ್ದು, ಇಬ್ಬರು ಭಕ್ತರಿಗೆ ಗಾಯಗಳಾಗಿವೆ.
ಉತ್ತರ ಪ್ರದೇಶದದಿಂದ ನಾಲ್ಕು ಬಸ್ಗಳಲ್ಲಿ ಹನುಮಂತನ ಭಕ್ತರು ಅಂಜನಾದ್ರಿಗೆ ಆಗಮಿಸಿದ್ದರು. ವಾಪಸ್ ಆಗುತ್ತಿದ್ದಾಗ ಬಸ್ಗಳನ್ನು ತಡೆದ ಸ್ಥಳೀಯರು ಜಗಳ ಎತ್ತಿದ್ದಾರೆ. ಮಾತಿನ ಚಕಮಕಿ ನಡೆದಿದ್ದು, ಉತ್ತರ ಪ್ರದೇಶದ ಬಸ್ ಮೇಲೆ ಸ್ಥಳೀಯರು ಕಲ್ಲೆಸೆದಿದ್ದಾರೆ.
ವಿದ್ಯುತ್ ವೈಯರ್ ತುಂಡಾಗುವಂತೆ ಬಸ್ ಚಾಲನೆ ಮಾಡಿದ್ದಾರೆ ಅಂತ ಆರೋಪಿಸಿದ್ದಾರೆ.
ಘಟನೆಯಲ್ಲಿ ಉತ್ತರಪ್ರದೇಶ ಮೂಲದ ರಾಮಕುಮಾರ್ ಹಾಗೂ ಮೋನು ಎಂಬವರ ತಲೆಗೆ ಗಾಯಗಳಾಗಿದ್ದು, ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಖಂಡಿಸಿ ಗಂಗಾವತಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉತ್ತರ ಪ್ರದೇಶದ ನೂರಾರು ಭಕ್ತರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.
ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.
ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…