ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮ್ಯಾನ್ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಎಂದು ತಿಳಿದುಬಂದಿದೆ. ಶವವನ್ನು ಸರ್ಕಾರಿ ಆಸ್ಪತ್ರೆ ರವಾನೆ ಮಾಡಲಾಗಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.