News Karnataka Kannada
Sunday, May 05 2024
ಕ್ರೈಮ್

ಮಹಾರಾಣಿ ವಿವಿ ಕ್ಯಾಂಪಸ್​ನಲ್ಲಿ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿನಿಯರು ಗಂಭೀರ

Maharani's University campus: Two students seriously injured in accident
Photo Credit : News Kannada

ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕ್ಯಾಂಪಸ್​ ಒಳಗೆ ಕಾರೊಂದು ವೇಗವಾಗಿ ಬಂದು ವಿದ್ಯಾರ್ಥಿನಿಯರಿಗೆ ಭೀಕರವಾಗಿ ಗುದ್ದಿದೆ. ಪರಿಣಾಮಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಆವರಣದ ಒಳಗಡೆ ಬೆಳ್ಳಂಬೆಳಗ್ಗೆ ಭೀಕರ ಆಕ್ಸಿಡೆಂಟ್ ನಡೆದಿದೆ. ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿಯರು ಇದ್ದ ವೇಳೆ ಅತಿ ವೇಗವಾಗಿ ಬಂದು ಕಾರು ಇಬ್ಬರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದು ಬಳಿಕ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಗುದ್ದಿದ್ದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಇನ್ನು ಮೂಲಗಳ ಪ್ರಕಾರ ಕಾರು ವಿವಿಯ ಪ್ರೊಫೆಸರ್ ಒಬ್ಬರದು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು