Categories: ಕ್ರೈಮ್

ಇದೆಂಥ ವಿಕೃತಿ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ರೇಪ್‌,ಕೊಲೆ !

ಒಡಿಶಾ: ಅಣ್ಣನೇ ತನ್ನ ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ನ.3 ರಂದು ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಹೀಗಾಗಿ ತಂಗಿಯನ್ನು ಕೊಲ್ಲಲು ಮುಂದಾಗಿದ್ದಾನೆ.

ಯುವತಿ ಸೊಪ್ಪು ಸಂಗ್ರಹಿಸಲು ಕಾಡಿಗೆ ತೆರಳಿದ್ದಾಗ, ಇದರ ಲಾಭ ಪಡೆದ ಅಣ್ಣ ತನ್ನ ಸ್ನೇಹಿತರನ್ನು ಕರೆಸಿಕೊಂಡು ಅವರಿಗೆ ಮದ್ಯಾಪಾನ ಮಾಡಿಸಿ, ತಾನು ಮದ್ಯ ಸೇವಿಸಿ ಸ್ನೇಹಿತರ ಜೊತೆಗೂಡಿ ತಂಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ಅನುಮಾನ ಬರಬಾರದಂತೆ ಪೊಲೀಸರಿಗೆ ಮಿಸ್ಸಿಂಗ್‌ ದೂರು ದಾಖಲಿಸಿದ್ದಾನೆ. ಸತತ ವಿಚಾರಣೆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

 

 

 

 

Ashitha S

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

13 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

27 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

43 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

47 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

2 hours ago