News Karnataka Kannada
Tuesday, April 30 2024
ಕ್ರೈಮ್

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Man arrested for selling drugs
Photo Credit : News Kannada

ಮಂಗಳೂರು: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹರೇಕಳ ಗ್ರಾಮದ ಬಜಾಲ್‌ ಪಡ್ಪು ಮಸೀದಿ ಹತ್ತಿರ ನಿವಾಸಿ ಹಸೈನಾರ್‌ ಎಂಬಾತನನ್ನು ವಶಕ್ಕೆ ಪಡೆದು ಆತನ ವಶದಿಂದ 12 ಗ್ರಾಂ ತೂಕದ 60,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 70,500 ರೂ ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿ ವಿರುದ್ದ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣಗಳು ದಾಖಲಾಗಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು