Categories: ಕ್ರೈಮ್

ವಿದ್ಯಾರ್ಥಿನಿಗೆ ಲೈಗಿಂಕ ಕಿರುಕುಳ: ಆರೋಪಿಯ ಬಂಧನ

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ಘಟನೆ ನಡೆದಿದೆ.

ಬಂಟ್ವಾಳದ ಅಗ್ರಾರ್ ನಿವಾಸಿಯಾಗಿರುವ ವಿದ್ಯಾರ್ಥಿನಿ ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ‌ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.

ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿ ಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Ashika S

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

15 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

33 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

47 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

58 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago