ಜೈಪುರ: ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಥಳಿಸಿ, ವಿವಸ್ತ್ರಗೊಳಿಸಿ, ಆಕೆಯ ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಈ ಘಟನೆಯನ್ನು ವಿಡಿಯೋ ಚಿತ್ರೀಕರಿಸಲಾಗಿದ್ದು ಮಹಿಳೆಯ ಪತಿ ಎಂದು ಹೇಳಲಾದ ವ್ಯಕ್ತಿಯೊಬ್ಬರು 21 ವರ್ಷದ ಮಹಿಳೆಯನ್ನು ತಮ್ಮ ಮನೆಯ ಹೊರಗೆ ವಿವಸ್ತ್ರಗೊಳಿಸುತ್ತಿರುವುದನ್ನು ಮತ್ತು ಸಹಾಯಕ್ಕಾಗಿ ಕಿರುಚುತ್ತಿದ್ದಾಗ ಆಕೆಯನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವುದು ಕಂಡುಬಂದಿದೆ. ಪೊಲೀಸರ ಪ್ರಕಾರ, ಮಹಿಳೆ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದ್ದು, ಇದೇ ಕಾರಣದಿಂದ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮದುವೆಯಾಗಿದ್ದರೂ ಮತ್ತೊಬ್ಬ ಪುರುಷನೊಂದಿಗೆ ವಾಸಿಸುತ್ತಿರುವ ಕಾರಣದಿಂದ ಮಹಿಳೆಯ ಅತ್ತೆ ಆಕೆಯನ್ನು ಅಪಹರಿಸಿ ತಮ್ಮ ಗ್ರಾಮಕ್ಕೆ ಕರೆದೊಯ್ದು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ ಎಂದು ರಾಜಸ್ಥಾನದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಹೇಳಿದ್ದಾರೆ.