ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವ್ಯಕ್ತಿ ಪತ್ನಿ ತನಗೆ ಕಿರುಕುಳ ಕೊಡುತ್ತಿದ್ದಾಳೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು, ಆದರೆ ದೂರು ಸ್ವೀಕರಿಸಲು ಅಧಿಕಾರಿ ನಿರಾಕರಿಸಿದ್ದರು. ಅದಕ್ಕೆ ಬೇಸರಗೊಂಡ ವ್ಯಕ್ತಿ ಅಧಿಕಾರಿಯ ಮನೆ ಎದುರೇ ವಿಷ ಸೇವಿಸಿ ಇಹಲೋಕ ತ್ಯಜಿಸಿದ್ದಾರೆ.
ಎರಡು ತಿಂಗಳ ಹಿಂದೆ ಪ್ರದೀಪ್ ಮತ್ತು ಇಶಾ ವಿವಾಹವಾಗಿದ್ದು, ಪ್ರದೀಪ್ ಅವರಿಂದ 5 ಲಕ್ಷ ರೂ.ಗೆ ಬೇಡಿಕೆಯಿಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821