News Karnataka Kannada
Saturday, May 11 2024
ಕ್ರೈಮ್

ಸಾಮಾಜಿಕ ಬಹಿಷ್ಕಾರಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ- ಕುಟುಂಬಸ್ಥರ ಪ್ರತಿಭಟನೆ

ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.
Photo Credit : News Kannada

ಗುಂಡ್ಲುಪೇಟೆ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯಡವನಳ್ಳಿ ಗ್ರಾಮದ ವೈ.ಎಸ್.ಶಿವರಾಜು(45) ನೇಣು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಯಡವನಹಳ್ಳಿ ಗ್ರಾಮದ ಯಜಮಾನರಾದ ಕೃಷ್ಣ, ಚಂದು, ರೇವನಾಯಕ, ಸಂತೋಷ್, ಸಂದೇಶ್, ವೆಂಕಟರಮಣನಾಯಕ, ನಿಂಗನಾಯಕ, ಚಿಕ್ಕಬೆಳ್ಳನಾಯಕ, ಆಲತ್ತೂರು ಮಹದೇವನಾಯಕ, ಡಿ.ಮಹದೇವಮನಾಯಕ, ದೇವನಾಯಕ, ಚಿನ್ನಸ್ವಾಮಿ ನಾಯಕ, ರಂಗಸ್ವಾಮಿನಾಯಕ ಎಂಬ 13 ಮಂದಿ ವಿರುದ್ಧ ಬೇಗೂರು ಪೊಲೀಸರು FIR ದಾಖಲಿಸಿದ್ದಾರೆ.

ಪ್ರತಿಭಟನೆ: ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಮತ್ತು ಸಂಬಂಧಿಕರು ಬೇಗೂರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸುತ್ತೇವೆ, ತನಿಖೆ ಕೈಗೊಳ್ಳುತ್ತೇವೆ, ನ್ಯಾಯ ಕೊಡಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು