ಚಿಕ್ಕಬಳ್ಳಾಪುರ: ಇಲ್ಲಿನ ಬಾಗೇಪಲ್ಲಿ ಪಟ್ಟಣದ ಟಿಬಿ ಕ್ರಾಸ್ ಹೋಟೆಲ್ ಬಳಿ ವ್ಯಕ್ತಿಯೊಬ್ಬರ ಕತ್ತು ಸೀಳಿ ಬರ್ಬರ ಹತ್ಯೆ ಮಡಿದ ಘಟನೆ ನಡೆದಿದೆ.
ಆಂಧ್ರ ಮೂಲದ ದೂಮಕೇತುಪಲ್ಲಿ ಗ್ರಾಮದ ನಿವಾಸಿ ವೆಂಕಟೇಶಪ್ಪ (55) ಕೊಲೆಯಾದವರು. ವೆಂಕಟೇಶಪ್ಪ ನ ಕತ್ತು ಸೀಳಿ ಹಂತಕರು ಕೊಲೆ ಮಾಡಿ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.