News Karnataka Kannada
Monday, April 29 2024
ಕ್ರೈಮ್

ಪತ್ನಿಯನ್ನು ಸೀಮೆ ಎಣ್ಣೆ ಸುರಿದು ಕೊಂದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ.
Photo Credit : News Kannada

ಬೀದರ್: ಪತ್ನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೆ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ಗಂಡನಿಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ತಾಲೂಕಿನ ಯದಲಾಪೂರ ಗ್ರಾಮದ ನಿವಾಸಿ ತುಕಾರಾಮ ರೆಡ್ಡಿ ಟೊಣ್ಣೆ (52) ಶಿಕ್ಷೆಗೆ ಗುರಿಯಾದ ವ್ಯಕ್ತಿ. 2014ರಲ್ಲಿ ಸಿರ್ಸಿ ಔರಾದನ ಪೂಜಾ ಎಂಬವರನ್ನು ಈತ ಮದುವೆಯಾಗಿದ್ದ. ಮದುವೆಯಾದ ದಿನದಿಂದಲೇ ಪತ್ನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಶುರು ಮಾಡಿದ್ದ. ಎರಡು ವರ್ಷ ಕಳೆಯುವಷ್ಟರಲ್ಲಿ ಆತನ ಕ್ರೌರ್ಯ ಯಾವ ಮಟ್ಟಿಗೆ ಹೆಚ್ಚಿತ್ತೆಂದರೆ ಕೊನೆಗೆ ಆತ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ.

ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಿಪಿಐ ಶಿವನಗೌಡ ಪಾಟೀಲ್ ಅವರು ಪ್ರಕರಣದ ಕುರಿತು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ಕುರಿತು ವಿಚಾರಣೆ ನಡೆಸಿದ ಬಸವಕಲ್ಯಾಣದ ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಘವೇಂದ್ರ ಚನ್ನಬಸಪ್ಪ ಅವರು ಆರೋಪಿತನಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 2.56 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರಕಾರಿ ಅಭಿಯೋಜಕ ಬಸವಂತ ರೆಡ್ಡಿ ವಾದ ಮಂಡಿಸಿದ್ದು, ಮೃತ ಮಹಿಳೆಗೆ ನ್ಯಾಯ ಒದಗಿಸುವಲ್ಲಿ, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು