News Karnataka Kannada
Friday, May 03 2024
ಕ್ರೈಮ್

ಸ್ನೇಹಿತರೊಂದಿಗೆ ಈಜಲು ತೆರಳಿದಾತ ನೀರುಪಾಲು

Man who went for a swim with his friends drowned
Photo Credit : News Kannada

ಮಂಗಳೂರು: ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಮರವೂರು ರೈಲ್ವೇ ಸೇತುವೆಯ ಸಮೀಪದ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕ ನದಿಗೆ ಬಿದ್ದು ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಜೆ ನಿವಾಸಿ ಸದ್ಯ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಾಕಿರ್ ಮೃತ ಯುವಕ. ಶಾಕಿರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಬಳಿ ನದಿಯಲ್ಲಿ ಈಜಲು ತೆರಳಿದ್ದರು.

ಈ ವೇಳೆ ಶಾಕಿರ್ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕಾರ್ಯಾಚರಣೆ ನಡೆಸಿ ಮೃತದೇಹ ಮೇಲೆತ್ತಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು