Categories: ಕ್ರೈಮ್

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 46.52 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು: ನಗರದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಐವರು ಪ್ರಯಾಣಿಕರನ್ನು ತಪಾಸಣೆ ನಡೆಸಿ ಅಕ್ರಮ ಸಾಗಾಟದ 46.52 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳೂರಿಗೆ ವಿವಿಧ ವಿಮಾನಗಳಲ್ಲಿ (IX814, IX384, 6E1163) ಆಗಮಿಸುತ್ತಿದ್ದ ಐವರು ಪ್ರಯಾಣಿಕರನ್ನು ಗ್ರೀನ್ ಕ್ರಾಸ್, ಸ್ಕ್ಯಾನಿಂಗ್, ಟ್ರಾಲಿ ಬ್ಯಾಗ್‌ಗಳ ತಪಾಸಣೆ ಮಾಡಲಾಗಿತ್ತು. ಈ ವೇಳೆ ಅವರಲ್ಲಿ ಅಕ್ರಮ ಸಾಗಾಟದ ಚಿನ್ನ ಪತ್ತೆಯಾಗಿದೆ. ಈ ಪ್ರಯಾಣಿಕರು ವೆಸ್ಟ್ ಮತ್ತು ಒಳ ಉಡುಪುಗಳ ಪದರಗಳ ನಡುವೆ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು, ಏರ್ ಪಾಡ್‌ಗಳಲ್ಲಿ ಬಚ್ಚಿಟ್ಟು, ಟ್ರಾಲಿ ಬ್ಯಾಗ್‌ಗಳ ಬೀಡಿಂಗ್ ರಾಡ್‌ಗಳ ನಡುವೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿದ್ದರು.

ತಕ್ಷಣ ಚಿನ್ನ ಸಹಿತ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಯಾಣಿಕರಿಂದ 24 ಕ್ಯಾರೆಟ್ ನ 775 ಗ್ರಾಂ ತೂಕದ 46,52,270 ರೂ. ಮೌಲ್ಯದ ಚಿನ್ನವನ್ನು ಪ್ರಯಾಣಿಕರಿಂದ ವಸೂಲಿ ಮಾಡಲಾಗಿದೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago