Categories: ಕ್ರೈಮ್

ವಿಮಾನದಲ್ಲಿ ಬಂದು ಕಳ್ಳತನ: ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ದರೋಡೆಕೋರರು

ಮಂಗಳೂರು: ವಿಮಾನದಲ್ಲಿ ಬಂದು ರೈಲಿನಲ್ಲಿ ಪ್ರಯಾಣಿಕರ ಹಣ, ಚಿನ್ನ ಕದ್ದು ವಾಪಸ್​ ವಿಮಾನದಲ್ಲೇ ಪರಾರಿಯಾಗುತ್ತಿದ್ದ ಅಂತಾರಾಜ್ಯ ಹೈಟೆಕ್‌ ದರೋಡೆಕೋರರು ಕೊನೆಗೂ ಮಂಗಳೂರು ರೈಲ್ವೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಯುಪಿ ಮೂಲದ ಅಭಯರಾಜ್ (26), ಹರಿಶಂಕರ್ ಗಿರಿ(25) ಬಂಧಿತ ಖದೀಮರು.

ಸೆಪ್ಟೆಂಬರ್ 28ರಂದು ಮಂಗಳೂರು-ಸುರತ್ಕಲ್ ಮಾರ್ಗದ ರೈಲಿನಲ್ಲಿ ನಡೆದಿದ್ದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಮೇಲೆ ಈ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಈ ಹೈಟೆಕ್‌ ಕಳ್ಳತನದ ದಂಧೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರಂದು ಮಂಗಳೂರು- ಸುರತ್ಕಲ್ ಮಧ್ಯೆ ರೈಲಿನಲ್ಲಿ ಪ್ರಯಾಣಿಕರ ಸುಲಿಗೆ ನಡೆದಿತ್ತು. ಬಳಿಕ ಮಂಗಳೂರು ರೈಲ್ವೆ ಪೊಲೀಸರು, ಸಂಶಯದಿಂದ ರೈಲಿನಲ್ಲಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಈ ಕೃತ್ಯ ಬಯಲಾಗಿದೆ.

ಸದ್ಯ ಇದೀಗ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದು, ಆರೋಪಿಗಳಿಂದ ಒಟ್ಟು 125 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯವರು ಎಂದು ತಿಳಿದು ಬಂದಿದ್ದು, ಈ ಬಗ್ಗೆ ಮಂಗಳೂರು ರೈಲ್ವೆ ಪೊಲಿಸರು ಇನ್ನಷ್ಟು ತನಿಖೆ ನಡೆಸಿದ್ದಾರೆ.

Ashika S

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

2 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

14 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

23 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

34 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

53 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago