News Karnataka Kannada
Saturday, May 04 2024
ಕ್ರೈಮ್

ಬೀಡ್ ಜಿಲ್ಲೆಯಲ್ಲಿ ಮರಾಠ ಮೀಸಲಾತಿ ಹೋರಾಟ: 49 ಮಂದಿಯ ಬಂಧನ

Maratha quota agitation: 49 arrested
Photo Credit : Twitter

ಛತ್ರಪತಿ ಸಂಭಾಜಿನಗರ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಬೀಡ್ ಜಿಲ್ಲೆಯಲ್ಲಿ ಪೊಲೀಸರು 49 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ರಾಜಕಾರಣಿಗಳ ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಸರಣಿ ಘಟನೆಗಳ ನಂತರ ಸೋಮವಾರ(ಅ.30) ಸಂಜೆ ಬೀಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅಲ್ಲದೆ, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬೀಡ್ ಪೊಲೀಸ್ ವರಿಷ್ಠಾಧಿಕಾರಿ ನಂದಕುಮಾರ್ ಠಾಕೂರ್ ತಿಳಿಸಿದ್ದಾರೆ.’ಆರೋಪಿಗಳ ವಿರುದ್ಧ ಗಲಭೆ ಮತ್ತು ಜೀವಕ್ಕೆ ಅಪಾಯವನ್ನುಂಟುಮಾಡುವ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದುವರೆಗೆ 49 ಮಂದಿಯನ್ನು ಬಂಧಿಸಲಾಗಿದೆ. ರಾತ್ರಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು