News Karnataka Kannada
Sunday, April 28 2024
ಕ್ರೈಮ್

ಇರಾಕ್‌ ನಲ್ಲಿ ಮದುವೆ ಸಮಾರಂಭದಲ್ಲಿ ಅಗ್ನಿ ಅವಘಡ: 100ಕ್ಕೂ ಅಧಿಕ ಮಂದಿ ಸಾವು

More than 100 killed in iraq wedding fire
Photo Credit : Twitter

ಬಾಗ್ದಾದ್‌: ಇರಾಕ್‌ ನ ಹಮ್ದನಿಯಾ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಮದುವೆ ಸಮಾರಂಭದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮೊಸುಲ್ ನಗರದ ಹೊರ ವಲಯದಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟಾಕಿ ಸಿಡಿಸುವಾಗ ಮದುವೆ ಮಂಟಪಕ್ಕೆ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಮದುವೆ ಕಾರ್ಯಕ್ರಮದಲ್ಲಿ 700 ಮಂದಿ ಭಾಗಿಯಾಗಿದ್ದರು.

ನೆವೆಹ್ ಪ್ರಾಂತ್ಯವು ಮೊಸುಲ್‌ನ ಹೊರಗೆ ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ (205 ಮೈಲಿ) ದೂರದಲ್ಲಿದೆ. ಈ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ವಧು-ವರರು ಕೂಡ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು