News Karnataka Kannada
Wednesday, May 01 2024
ಕ್ರೈಮ್

ಅಪಾರ್ಟ್ಮೆಂಟ್ ನಲ್ಲಿ ಕುತ್ತಿಗೆ ಸೀಳಿದ ಗಗನಸಖಿಯ ಶವ ಪತ್ತೆ

air hostess
Photo Credit : News Kannada

ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರೂಪಲ್ ಓಗ್ರೆ ಎಂದು ಗುರುತಿಸಲಾಗಿದೆ. ಛತ್ತೀಸ್ಗಢ ಮೂಲದವರಾದ ಈಕೆ, ಏರ್ ಇಂಡಿಯಾದಲ್ಲಿ ತರಬೇತಿಗಾಗಿ ಏಪ್ರಿಲ್ನಲ್ಲಿ ಮುಂಬೈಗೆ ಬಂದಿದ್ದರು.

ಉಪನಗರ ಅಂಧೇರಿಯ ಮರೋಲ್ ಪ್ರದೇಶದ ಕ್ರಿಶನ್ಲಾಲ್ ಮರ್ವಾಹ್ ಮಾರ್ಗದಲ್ಲಿರುವ ಎನ್ಜಿ ಕಾಂಪ್ಲೆಕ್ಸ್ನಲ್ಲಿರುವ ಫ್ಲಾಟ್ನಲ್ಲಿ ಭಾನುವಾರ ತಡರಾತ್ರಿ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಪ್ರಕರಣ ಕುರಿತು ಮತಷ್ಟು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು