News Karnataka Kannada
Monday, April 29 2024
ಕ್ರೈಮ್

ಮಹಾನಗರ ಪಾಲಿಕೆಯ ಪೌರ ಕಾರ್ಮಿಕನ ಮೇಲೆ ಹಲ್ಲೆ

Municipal corporation worker attacked
Photo Credit : News Kannada

ಮಂಗಳೂರು: ಮನೆ ಮನೆ ಕಸ ಸಂಗ್ರಹಿಸುವ ಮಹಾನಗರ ಪಾಲಿಕೆಯ ಪೌರ ಕಾರ್ಮಿಕನ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಬಳಿಯ ಸದಾಶಿವ ನಗರದಲ್ಲಿ ನಡೆದಿದೆ.

ಹಲ್ಲೆಗೀಡಾದ ಕಾರ್ಮಿಕ ರಾಜು ಎಂಬಾತನಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕನ ಮೇಲಿನ ಹಲ್ಲೆ ಘಟನೆಯನ್ನು ಪೌರ ಕಾರ್ಮಿಕರ ಸಂಘಟನೆ ಖಂಡಿಸಿದ್ದು ಭಾನುವಾರ ಮಂಗಳೂರು ನಗರದಾದ್ಯಂತ ಕಸ ವಿಲೇವಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಹಲ್ಲೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಲ್ಲೆ ಘಟನೆ ಬಗ್ಗೆ ಮಂಗಳೂರು ಸಫಾಯಿ ಕರ್ಮಚಾರಿ ಯೂನಿಯನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಯೂನಿಯನ್ ಉಪಾಧ್ಯಕ್ಷ ಸುಧೀರ್ ಕುಲಾಲ್ ಹೇಳಿಕೆ ನೀಡಿದ್ದು ಮನೆ ಮನೆ ಕಸ ಸಂಗ್ರಹಿಸುವ ಕಾರ್ಮಿಕರ ಮೇಲೆ ನಿರಂತರ ಹಲ್ಲೆ, ಕಿರುಕುಳಗಳು ನಡೆಯುತ್ತಿದೆ. ಇದನ್ನು ಸಂಘ ಖಂಡಿಸಿ ಭಾನುವಾರ ಮಂಗಳೂರು ನಗರದಾದ್ಯಂತ ಕಸ ಸಂಗ್ರಹ ಸ್ಥಗಿತ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು