Categories: ಕ್ರೈಮ್

ಖಡಕ್‌ ಮಹಿಳಾ ಅಧಿಕಾರಿ ಪ್ರತಿಮಾ ಸಾವಿನ ಸುತ್ತ ಅನುಮಾನದ ಹುತ್ತ

ಬೆಂಗಳೂರು: ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿರುವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಪ್ರತಿಮಾ ಗಣಿ ಭೂ ವಿಜ್ಞಾನ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಅಲ್ಲದೆ ಖಡಕ್‌ ಅಧಿಕಾರಿಯಾಗಿ ಹೆಸರು ಮಾಡಿದ್ದರು.

ಈ ಭೀಕರ ಕೊಲೆ ಹಿಂದಿನ ಕೈಗಳು ಯಾವುದು ಎಂಬ ಬಗ್ಗೆ ಪೊಲೀಸ್‌ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಪ್ರತಿಮಾ ಅವರನ್ನು ಕತ್ತು ಹಿಸುಕಿ ನಂತರ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಆದರೆ, ಕೊಲೆ ಆರೋಪಿಗಳು ಯಾರು? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಮಾತ್ರ ತಿಳಿದು ಬಂದಿಲ್ಲ. ಈ ನಡುವೆ ಪ್ರತಿಮಾರನ್ನು ನಿನ್ನೆ ಸಂಜೆ ಕಚೇರಿಯಿಂದ ಕರೆದುಕೊಂಡು ಬಂದ ಕಾರು ಚಾಲಕ ಇದುವರೆಗೂ ಪತ್ತೆಯಾಗಿಲ್ಲ, ಆತನ ಮೇಲೂ ಕೂಡ ಇದೀಗ ಅನುಮಾನ ವ್ಯಕ್ತವಾಗಿದೆ.

ಪ್ರತಿಮಾ ಸಹೋದರ ಗುತ್ತಿಗೆದಾರ: ಬನ್ನೇರುಘಟ್ಟ ರೋಡ್ ಬಳಿ ವಾಸವಾಗಿರುವ ಪ್ರತಿಮಾ ಸಹೋದರ ಪ್ರತೀಶ್, ಬಿಬಿಎಂಪಿಯಲ್ಲಿ ಗುತ್ತಿಗೆದಾರನಾಗಿದ್ದಾನೆ. ನಿನ್ನೆ ರಾತ್ರಿ ಪ್ರತಿಮಾರಿಗೆ ಕರೆ ಮಾಡಿದರೂ ಕಾಲ್ ರಿಸೀವ್ ಮಾಡದಿದ್ದಾಗ, ಕೆಲಸದಿಂದ ಸುಸ್ತಾಗಿರಬಹುದು ಎಂದು ಸುಮ್ಮನಾಗಿದ್ದನು. ಮತ್ತೆ ಬೆಳಗ್ಗೆ ಪೋನ್ ಮಾಡಿದ್ದು,ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಕೆಳಗಡೆ ವಾಸವಿದ್ದ ಮನೆಯವರಿಗೆ ತಿಳಿಸಿ ನೋಡಲು ಹೇಳಿದಾಗ, ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಯಾಗಿರುವ ಪ್ರತಿಮಾ ದಂಪತಿ ಅನೋನ್ಯವಾಗಿದ್ದರು. ಕಳೆದ ತಿಂಗಳು 22 ಮತ್ತು 23 ರಂದು ಪ್ರತಿಮಾ ಮನೆ ಗೃಹಪ್ರವೇಶ ನೆರವೇರಿಸಿದ್ದರು. ಈ ವೇಳೆ ಒಂದು ವಾರಗಳ ಕಾಲ ಪ್ರತಿಮಾ ತೀರ್ಥಹಳ್ಳಿಯಲ್ಲಿಯೇ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Ashika S

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

49 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago