News Karnataka Kannada
Thursday, April 18 2024
Cricket
ಕ್ರೈಮ್

ನೇಜಾರು ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ನ್ಯಾಯಾಂಗ ಬಂಧನ ಫೆ. 12ರವರೆಗೆ ವಿಸ್ತರಣೆ

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಅನ್ನು ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
Photo Credit : News Kannada

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು.

ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಕರಣದ ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಫೆ.9ರಂದು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆಂದು ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು