News Karnataka Kannada
Tuesday, April 30 2024
ಕ್ರೈಮ್

ನೇಜಾರು ಕೊಲೆ ಪ್ರಕರಣ: ಆರೋಪಿ ಚೌಗುಲೆಗೆ ಡಿ. 5ರವರೆಗೆ ನ್ಯಾಯಾಂಗ ಬಂಧನ

Nejaru murder case: Accused Chougule arrested Remanded to judicial custody till May 5
Photo Credit : News Kannada

ಉಡುಪಿ: ನೇಜಾರು ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಆರೋಪಿಯನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಬಳಿಕ ಕಸ್ಟಡಿಗೆ ಪಡೆದುಕೊಂಡ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ, ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ.

ಇದೀಗ ಆರೋಪಿಯನ್ನು ನ.28ರವರೆಗೆ ಕಸ್ಟಡಿಯಲ್ಲಿ ಇಟ್ಟುಕೊಳ್ಳುವ ಅಗತ್ಯ ಇಲ್ಲ ಎಂಬುದನ್ನು ಮನಗಂಡ ಪೊಲೀಸರು, ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಕರೆತಂದರು. ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಧೀಶೆ ದೀಪಾ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಡಿ. 5ರಂದು ಮತ್ತೆ ಆರೋಪಿಯನ್ನು ನ್ಯಾಯಕ್ಕೆ ಹಾಜರಿ ಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು