News Karnataka Kannada
Monday, April 29 2024
ಕ್ರೈಮ್

ಭಯೋತ್ಪಾದಕರಿಗೆ ನೆರವು ನೀಡಿದ ಆರೋಪಿಯ ಸ್ಥಿರಾಸ್ತಿ ಜಪ್ತಿ ಮಾಡಿದ ಎನ್‌ಐಎ

Bangla to Bengaluru illegal migration: NIA arrests man in Kerala
Photo Credit : News Kannada

ಜಮ್ಮು: ಭಯೋತ್ಪಾದಕರಿಗೆ ಹಣ, ವಸತಿ ಹಾಗೂ ಸರಕು ಸಾರಿಗೆ ಸೇರಿದಂತೆ ಇನ್ನಿತರ ಸೌಲಭ್ಯ ಒದಗಿಸುತ್ತಿದ್ದ ಆರೋಪದ ಮೇಲೆ ಬಂಧಿಸಿರುವ ಮೊಹಮ್ಮದ್ ಯಾಸಿನ್‌ಗೆ ಸೇರಿದ ಸ್ಥಿರಾಸ್ತಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು ಜಪ್ತಿ ಮಾಡಿದೆ.

ಬಾಲಾಕೋಟ್ ಸೆಕ್ಟರ್‌ನಲ್ಲಿ ಭಯೋತ್ಪಾದಕರಿಗೆ ವಿವಿಧ ಸೌಕರ್ಯಗಳನ್ನು ಒದಗಿಸುತ್ತಿದ್ದ ಈತನನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿಸಲಾಗಿತ್ತು.

ಸೆಪ್ಟೆಂಬರ್ 30ರಂದು ಜಮ್ಮುವಿನಲ್ಲಿರುವ ಎನ್‌ಐಎ ಕೋರ್ಟ್ ಆದೇಶದ ಮೇರೆಗೆ ಬಾಲಾಕೋಟ್ ತಾಲ್ಲೂಕು ವ್ಯಾಪ್ತಿಯಲ್ಲಿರುವ ಧಾಬಿ-ಧಾರಟಿ ಗ್ರಾಮದಲ್ಲಿದ್ದ ಆರೋಪಿಯ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಮೊಹಮ್ಮದ್ ಯಾಸೀನ್‌ಗೆ ಸೇರಿದ ಏಳಕ್ಕೂ ಹೆಚ್ಚು ಎಕರೆ ಜಮೀನು ಸೇರಿದಂತೆ ಇನ್ನಿತರ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು