ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್ನಲ್ಲಿಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ ನಡೆದಿದೆ.
50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.
ನನ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವೃಂದಾ ಶುಕ್ಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.