News Karnataka Kannada
Monday, April 29 2024
ಕ್ರೈಮ್

ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಪಲ್ಟಿ: 15ಕ್ಕೂ ಹೆಚ್ಚು ಜನರಿಗೆ ಗಾಯ

Over 15 injured as bus carrying Ayyappa devotees overturns
Photo Credit : News Kannada

ಚಿಕ್ಕಮಗಳೂರು:  ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಸಂಚರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಗುಡ್ಡೆತೋಟದ ಬಳಿ ನಡೆದಿದೆ.

ಬಸ್ ಜಯಪುರದಿಂದ ಗುಡ್ಡೆತೋಟದ ಮೂಲಕ ಹೊರನಾಡಿಗೆ ಹೋಗುವಾಗ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ.

ಮೈಸೂರು ಮೂಲದ ಬಸ್ಸಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿ ಬಂದಿದ್ದ ಮಾಲಾಧಾರಿಗಳು, ಶೃಂಗೇರಿ‌ ಶಾರದಾಂಬೆ ದರ್ಶನ ಪಡೆದು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ಹೊರಟಿದ್ದರು.

ಬಸ್ಸಿನಲ್ಲಿ 34 ಜನ ಮಾಲಾಧಾರಿಗಳು ಪ್ರಯಾಣ ಮಾಡುತ್ತಿದ್ದರು. ಅವರಲ್ಲಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನ ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು