ಉತ್ತರ ಕನ್ನಡ: ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಕಾಡುಹಂದಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಇನ್ನು ಚಂಡಿಯಾ ಗ್ರಾಮದ ಸುತ್ತಮುತ್ತ ಓಡಾಡುತ್ತಿದ್ದ ಈ ಕಾಡು ಹಂದಿಗೆ, ಕಾಂತಾರ ಸಿನಿಮಾದ ನಂತರ ಪಂಜುರ್ಲಿ ದೈವದ ಸ್ಥಾನ ಕೊಟ್ಟು ಗ್ರಾಮಸ್ಥರು ಪೂಜೆ ಮಾಡುತ್ತಿದ್ದರು.
ಅದರಂತೆ ಊರಿನಲ್ಲಿ ಜನ ನೀಡಿದ ಆಹಾರವನ್ನ ಸೇವಿಸುತ್ತ ಜನರ ಪ್ರೀತಿಯನ್ನ ಗಳಿಸಿದ್ದ ಕಾಡು ಹಂದಿಯನ್ನ, ತಡರಾತ್ರಿ(ಆ.5) ರಾತ್ರಿ ಯಾರೋ ದುಷ್ಕರ್ಮಿಗಳು ಬಾಂಬ್ ಇಟ್ಟು ಹತ್ಯೆ ಮಾಡಿದ್ದಾರೆ. ಈ ಕುರಿತು ಕಾರವಾರ ಅರಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.