News Karnataka Kannada
Monday, May 06 2024
ಕ್ರೈಮ್

ಲೆಕ್ಚರ್‌ ಕೊಟ್ಟ ಕಾಟಕ್ಕೆ ನೇಣಿಗೆ ಶರಣಾದ ಪಾಲಿಟೆಕ್ನಿಕ್ ವಿದ್ಯಾರ್ಥಿ

Polytechnic student commits suicide after being harassed by lecturer
Photo Credit : News Kannada

ಚಿಕ್ಕಬಳ್ಳಾಪುರ: ಖಾಸಗಿ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕ ವಿನಃ ಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಅದೇ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ವಿದ್ಯಾರ್ಥಿ ಗಜೇಂದ್ರ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಗರದ ಬಿ.ಜಿ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೃತ ವಿದ್ಯಾರ್ಥಿ ಗಜೇಂದ್ರ 2 ವರ್ಷದ ಮೆಕ್ಯಾನಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದ. ಗಜೇಂದ್ರ ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್​ನಲ್ಲಿ ವಿಡಿಯೋ ರೆಕಾರ್ಡ ಮಾಡಿದ್ದು ತನ್ನ ಸಾವಿಗೆ ತನ್ನ ಕಾಲೇಜಿನ ಉಪನ್ಯಾಸಕ ಮಂಜುನಾಥ್​ ಕಾರಣ. ವಿನಃ ಕಾರಣ ತನ್ನನ್ನು ಟಾರ್ಗೆಟ್ ಮಾಡಿದ್ದು ಸಹಪಾಠಿಗಳ ಸಮ್ಮೂಖದಲ್ಲಿ ತನಗೆ ನಿಂದಿಸುವುದು, ನೋಟ್ ಬುಕ್ ಹರಿದು ಹಾಕುವುದನ್ನು ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಹೇಳಿಕೊಂಡಿದ್ದಾನೆ.

ವಿದ್ಯಾರ್ಥಿ ಆತ್ಮಹತ್ಯೆಯನ್ನ ಖಂಡಿಸಿ ಕಾಲೇಜಿನ ಎದುರು ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮಂಜುನಾಥ್ ಪರಾರಿಯಾಗಿದ್ದಾರೆ. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಮೂಲದ ನಿವಾಸಿ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಂದಿಗಿರಿಧಾಮ ಪಿಎಸ್ಐ ಹರೀಶ್ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು