ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.
ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆ ತರಲಾಯಿತು.
ಪೊಲೀಸರ ಪರವಾಗಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ. ನದಾಫ್, ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ಶ್ಯಾಮ್ ಪ್ರಸಾದ್ ಆರೋಪಿಯನ್ನು ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.