News Karnataka Kannada
Tuesday, May 07 2024
ಕ್ರೈಮ್

ಪುತ್ತೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

Puttur: A student committed suicide by hanging herself.
Photo Credit : News Kannada

ಪುತ್ತೂರು: ಇಲ್ಲಿನ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.

ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ. ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಇನ್ನು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು