ಕ್ರೈಮ್

ಅಪ್ರಾಪ್ತೆ ಮೇಲೆ ನಿವೃತ್ತ ಸಬ್‌ಇನ್ಸ್​ಪೆಕ್ಟರ್​ ನಿಂದ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ನನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ ಲೈಂಗಿಕ ಅಪರಾಧಗಳ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಬಂಧಿತ ಆರೋಪಿಯನ್ನು ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ 74 ವರ್ಷದ ಅಬ್ದುಲ್ ಹಫೀಜ್ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ-ತಾಯಿ ಆರೋಪಿಗೆ ಸೇರಿದ ಮನೆಯಲ್ಲೇ ಬಾಡಿಗೆಗಿದ್ದರು. ಸೋಮವಾರ, ಬಾಲಕಿ ಆಟಿಕೆ ತೆಗೆದುಕೊಳ್ಳಲು ಬಂದಾಗ ಆರೋಪಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿಯ ಪೋಷಕರಿಗೆ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Ashitha S

Recent Posts

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

9 seconds ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

5 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

19 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

41 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

44 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

1 hour ago