Categories: ಕ್ರೈಮ್

ತೆಲಂಗಾಣದಲ್ಲಿ 490 ಕೋಟಿ ರೂ.ಗಳ ಹಣ, ಚಿನ್ನಾಭರಣ ವಶ

ಹೈದರಾಬಾದ್: ತೆಲಂಗಾಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಇದುವರೆಗೆ ಚಿನ್ನ, ಬೆಳ್ಳಿ, ಹಣ ಸೇರಿದಂತೆ 490 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತೆಲಂಗಾಣದಲ್ಲಿ ಕಳೆದ 24 ಗಂಟೆಗಳಲ್ಲಿ 10.35 ಕೋಟಿ ರೂಪಾಯಿ ಮೌಲ್ಯದ ನಗದು, ಚಿನ್ನ, ಬೆಳ್ಳಿ , ಲಿಕ್ಕರ್‌ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಇದರೊಂದಿಗೆ ಚುನಾವಣಾ ಪೂರ್ವವಾಗಿ ರಾಜ್ಯದಲ್ಲಿ ವಶಪಡಿಸಿಕೊಂಡ ವಸ್ತುಗಳ ಮೌಲ್ಯ 490 ಕೋಟಿ ರೂ. ದಾಟಿದೆ.

ನವೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ, ಜಾರಿ ಸಂಸ್ಥೆಗಳು ರಾಜ್ಯಾದ್ಯಂತ 2.53 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿವೆ. ಮಾದರಿ ನೀತಿ ಸಂಹಿತೆ ಜಾರಿಯಾದ ಅಕ್ಟೋಬರ್ 9 ರಿಂದ ಅಧಿಕಾರಿಗಳು 172 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 75 ಲಕ್ಷ ರೂ. ಮೌಲ್ಯದ ಬೆಲೆಬಾಳುವ ಚಿನ್ನ, ಬೆಳ್ಳಿ ಸೇರಿದಂತೆ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಭರಣಗಳ ಪೈಕಿ 282 ಕೆಜಿ ಚಿನ್ನ, 1,167 ಕೆಜಿ ಬೆಳ್ಳಿ, 19,269 ಕ್ಯಾರೆಟ್ ವಜ್ರ ಮತ್ತು 5.35 ಗ್ರಾಂ ಪ್ಲಾಟಿನಂ ಸೇರಿದೆ.

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ನವೆಂಬರ್ 4 ರಂದು ಬೆಳಿಗ್ಗೆ 9 ರಿಂದ ನವೆಂಬರ್ 5 ರ ಬೆಳಿಗ್ಗೆ 9 ರವರೆಗೆ 4,558 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯ ಬೆಲೆ 60 ಕೋಟಿ ರೂ. ಆಗಿದೆ. ಕಳೆದ 24 ಗಂಟೆಗಳಲ್ಲಿ ನಡೆದ ತಪಾಸಣೆಯಲ್ಲಿ 1.95 ಕೋಟಿ ರೂಪಾಯಿ ಮೌಲ್ಯದ ಅಕ್ಕಿ, ಸೀರೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ashika S

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

23 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

31 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

31 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

46 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

52 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

1 hour ago