Categories: ಕ್ರೈಮ್

ಸರಣಿ ಅಪಘಾತ: ಕೊಂಡಾಣ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಗಂಭೀರ

ಉಳ್ಳಾಲ: ಕೆಎಸ್ ಆರ್ ಟಿಸಿ ಬಸ್‌ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾ‌ರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್‌ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ, ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

8 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

31 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

47 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago