ಕ್ರೈಮ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳ ಬಂಧನ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.

ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಇವರು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು.

ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Ashika S

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

3 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

15 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

17 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

25 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

28 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

36 mins ago