News Karnataka Kannada
Sunday, May 12 2024
ಕ್ರೈಮ್

ರೈಲಿನಡಿ ಬಿದ್ದು ವಿದ್ಯಾರ್ಥಿನಿ, ಶಾಲಾ ಬಸ್ ಚಾಲಕ ಆತ್ಮಹತ್ಯೆ

Student and school bus driver commit suicide after falling under train
Photo Credit : News Kannada

ಚಿಕ್ಕಮಗಳೂರು:  ಎಂಟನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ ಬಸ್ ಚಾಲಕ ರೈಲಿನಡಿ ಬಿದ್ದು ಆತ್ಮಹತ್ಯೆ  ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.

ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ಆತ್ಮಹತ್ಯೆ ಮಾಡಿಕೊಂಡವರು.

ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದನು. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು.

ತನ್ನನ್ನು ಪ್ರೀತಿಸುವಂತೆ ಮಗಳು ಜಾನವಿಗೆ ಸಂತೋಷ್ ಕಿರುಕುಳ ನೀಡುತ್ತಿದ್ದ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಆದರೂ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು