ಬೀದರ್: ಬಾಯ್ ಫ್ರೆಂಡ್ ನ ಟಾರ್ಚರ್ ನಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪವೊಂದು ವರದಿಯಾಗಿದೆ.
ಪಿಯುಸಿ (PUC)ಯಲ್ಲಿ ಓದುತ್ತಿದ್ದ ಬಾಲಕಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ಬೆಮಳಖೇಡ ಗ್ರಾಮದ ತನ್ನ ಮನೆಯಲ್ಲಿಯೇ ಪ್ರಿಯಾಂಕಾ(17) ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆತ್ಮಹತ್ಯೆಗೆ ಪ್ರಚೋದನೆ ಕೊಡಲು ಹೋದ ಯುವಕನ ವಿರುದ್ಧ ದೂರು ನೀಡಲು ಹೋದರೆ, ಪೊಲೀಸರು ತೆಗೆದುಕೊಳ್ಳುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಬಾಲಕಿಯ ತಾಯಿ ಗಂಗಮ್ಮ ನ್ಯಾಯಕ್ಕಾಗಿ ಎಸ್ಪಿ ಕಚೇರಿಗೆ ಅಲೆಯುತ್ತಿದ್ದಾರೆ.
ಕಳೆದೊಂದು ವರ್ಷದಿಂದ ಇವರಿಬ್ಬರು ಪ್ರೀತಿಸುತ್ತಿದ್ದರು, ಅದೇ ಪ್ರೀತಿಯ ಸಲುಗೆಯಿಂದ ಇಬ್ಬರು ಪೋಟೋ ತೆಗೆಸಿಕೊಂಡಿದ್ದಾರೆ. ಕೆಲವು ವಿಡಿಯೋಗಳನ್ನು ಯುವಕ ಮಾಡಿಕೊಂಡು ತನ್ನ ಮೊಬೈಲ್ನಲ್ಲಿ ಇಟ್ಟುಕೊಂಡಿದ್ದ. ನಂತರ ಪ್ರಿಯಾಂಕಾಳಿಗೆ ಹಣ ನೀಡುವಂತೆ ಪೀಡಿಸಿದ್ದಾನೆ. ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.