News Karnataka Kannada
Monday, April 29 2024
ಕ್ರೈಮ್

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಝ್: ಶಿಕ್ಷಕರಿಗೆ ಥಳಿತ

Students offer namaz at school, teachers thrashed
Photo Credit : IANS

ಅಹಮದಾಬಾದ್: ಇಲ್ಲಿನ ಖಾಸಗಿ ಶಾಲೆಯೊಂದು ಜಾಗೃತಿ ಕಾರ್ಯಕ್ರಮದ ಭಾಗವಾಗಿ ಹಿಂದೂ ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಹೇಳಿದೆ ಎಂದು ಆರೋಪಿಸಿ, ಮಂಗಳವಾರ ಸಂಘ ಪರಿವಾರದ ಕಾರ್ಯಕರ್ತರ ಪ್ರತಿಭಟನೆ ನಡೆಸಿ, ಶಿಕ್ಷಕರನ್ನು ಥಳಿಸಿದ ಘಟನೆ ನಡೆದಿದೆ ಎಂದು ಎಂದು ವರದಿಯಾಗಿದೆ.

ಪ್ರತಿಭಟನಾಕಾರರು ಶಿಕ್ಷಕರನ್ನು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 29 ರಂದು ಅಹಮದಾಬಾದ್‌ನ ಘಟ್ಲೋಡಿಯಾ ಪ್ರದೇಶದ ಕಲೋರೆಕ್ಸ್ ಫ್ಯೂಚರ್ ಸ್ಕೂಲ್‌ನಲ್ಲಿನಡೆದ ಕಾರ್ಯಕ್ರಮದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಘಟನೆಯ ಕುರಿತು ಕ್ಷಮೆಯಾಚಿಸಿರುವ ಶಾಲೆಯ ಆಡಳಿತ ಮಂಡಳಿ, ಈ ಕಾರ್ಯಕ್ರಮವು ವಿವಿಧ ಧರ್ಮಗಳ ಆಚರಣೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಯಾವುದೇ ವಿದ್ಯಾರ್ಥಿಯನ್ನು ನಮಾಝ್ ಮಾಡಲು ಒತ್ತಾಯಿಸಿಲ್ಲ, ಎಂದು ಸ್ಪಷ್ಟಣೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು