News Karnataka Kannada
Wednesday, May 01 2024
ಕ್ರೈಮ್

ನಾಲ್ಕು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

The accused, Andar, had been absconding abroad for four years
Photo Credit : News Kannada

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ ಆರೋಪಿ. ಈತ ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ. ಆದ್ದರಿಂದ ಮಂಗಳೂರು ಗ್ರಾಮಾಂತರ ಪೊಲೀಸರು ಈತನ ವಿರುದ್ಧ ಲುಕ್ ಔಟ್ ನೋಟೀಸ್ ಹೊರಡಿಸಿತ್ತು.

ಅಕ್ಟೋಬರ್ 14ರಂದು ಈತನು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಮುಂಬೈನ ಇಮಿಗ್ರೇಷನ್ ಅಧಿಕಾರಿಗಳು ಈತನ ವಿರುದ್ಧ ಲುಕ್ ಔಟ್ ನೋಟೀಸ್ ಜಾರಿಯಾಗಿರುವ ಬಗ್ಗೆ ಖಚಿತಪಡಿಸಿ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಗೆ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು