Categories: ಕ್ರೈಮ್

ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಉಡುಪಿ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್(55) ಎಂದು ಗುರುತಿಸಲಾಗಿದೆ. ಇವರು ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಬಳಿಕ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತೆರಳಿದ ಅವರು ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ, ಸೇತುವೆಯ ಮೇಲಿಂದ ನದಿಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು, ಸ್ಥಳೀಯರ ಸಹಕಾರದೊಂದಿಗೆ ದೋಣಿ ಮೂಲಕ ಹುಡುಕಾಟ ನಡೆಸಿದರು. ಬುಧವಾರ ಸಂಜೆ ವೇಳೆ ವ್ಯಕ್ತಿಯ ಮೃತದೇಹವು ಅಂಕುದ್ರು ಬಳಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತ ರವೀಂದ್ರ ಕಳೆದ 10 ವರ್ಷಗಳಿಂದ ಉಡುಪಿಯ ಪೈ ಇಂಟರ್‌ನ್ಯಾಶನಲ್ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಸೇಲ್ಸ್‌ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Ashika S

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

7 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

34 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

47 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago