News Karnataka Kannada
Monday, April 29 2024
ಕ್ರೈಮ್

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಮರಿಗೆ ಉರುಳಿದ ಕಾರು, ಚಾಲಕ ಸ್ಥಳದಲ್ಲಿಯೇ ಸಾವು

The driver lost control and the car fell into a 200 feet gorge, the driver died on the spot
Photo Credit : News Kannada

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಗುರುವಾರ ಸಂಭವಿಸಿದೆ. ರಂಜನ್ ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದ ಎನ್ನಲಾಗಿದ್ದು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಬ್ರುಕೊಡುಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಆದರೂ ತಡೆ ಗೋಡೆ ನಿರ್ಮಿಸದೆ ನಿರ್ಲಕ್ಷ ವಹಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು