News Karnataka Kannada
Friday, May 03 2024
ಕ್ರೈಮ್

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಎಸ್ಕೇಪ್‌ ಆದ ಕಳ್ಳರು

Thieves escape from police vehicle while being taken to court
Photo Credit : News Kannada

ಲಖನೌ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ಜಾನ್ಸಿ ರೈಲ್ವೆ ಕೋರ್ಟ್ ಗೆ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮೂವರು ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋರ್ಟ್ ಹೊರಭಾಗದಲ್ಲಿ ಪೊಲೀಸ್ ವ್ಯಾನ್ ನಿಲ್ಲಿಸಲಾಗಿತ್ತು. ಆದರೆ ಯಾವುದೇ ಭದ್ರತಾ ಸಿಬಂದಿ ಇಲ್ಲದಿರುವುದನ್ನು ಗಮನಿಸಿದ ಮೂವರು ಆರೋಪಿಗಳು ವ್ಯಾನ್ ನ ಬಾಗಿಲು ತೆರೆದು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೂವರು ಆರೋಪಿಗಳು ವ್ಯಾನ್ ನ ಬಾಗಿಲು ತೆರೆದು ರಸ್ತೆಯಲ್ಲಿ ಓಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮೂವರು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು