ರಾಮನಗರ: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ ಸಿಹಿ ಹಂಚಿಕೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಿಹಿ ಪದಾರ್ಥ ಸೇವೆನೆ ಮಾಡಿದ್ದಾರೆ. ಸಿಹಿ ತಿಂದಿದ್ದವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ವಾಂತಿಮಾಡಿಕೊಂಡು 20 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮನಗರ ದರ್ಗಾದಲ್ಲಿ ಸಿಹಿ ತಿಂಡಿ ತಿಂದವರು ಅಸ್ವಸ್ಥ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.