News Karnataka Kannada
Sunday, May 12 2024
ಕ್ರೈಮ್

ಪಶ್ಚಿಮ ಬಂಗಾಳ: ಬೃಹತ್ ಚಿಮಣಿ ಕುಸಿದು ಮೂವರು ಸಾವು

Three killed as huge chimney collapses
Photo Credit : News Kannada

ಪಶ್ಚಿಮ ಬಂಗಾಳ: ಬೃಹತ್ ಚಿಮಣಿಯ ಒಂದು ಪಾರ್ಶ್ವದ ಇಟ್ಟಿಗೆಗಳು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ 24 ಪರಗಣ ಜಿಲ್ಲೆಯ ಬಸಿರ್ಹತ್ ಪ್ರದೇಶದ ಧಲ್ತಿತಾ ಗ್ರಾಮದಲ್ಲಿ  ನಡೆದಿದೆ.

ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಸುಮಾರು 20 ಜನರು ಬಸಿರ್ಹತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಗಾಯಾಳುಗಳನ್ನು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಒಬ್ಬರು ಸಾವನ್ನಪ್ಪಿದರೆ, ಇಬ್ಬರ ದೇಹ ಅವಶೇಷಗಳಡಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ತಂಡವನ್ನು ನಿಯೋಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು