News Karnataka Kannada
Friday, May 03 2024
ಕ್ರೈಮ್

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Tipper lorry collides with bike, rider dies on the spot
Photo Credit : News Kannada

ಧಾರವಾಡ:  ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ  ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ಹೊರವಲಯದ ಹೊಯ್ಸಳ ನಗರದಲ್ಲಿ ನಡೆದಿದೆ.

ನಾಗಯ್ಯ ಹಿರೇಮಠ್ (56) ಮೃತ ದುರ್ದೈವಿ.

ತಾರಿಹಾಳದಿಂದ ಬೇಲೂರು ಕಡೆಗೆ ಹೋಗುವಾಗ ವೇಗವಾಗಿ ಬಂದ ಟಿಪ್ಪರ್‌ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ ಸಮೇತ ಹಾರಿ ಸವಾರ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಟೈಯರ್ ಅಡಿ ಸಿಲುಕಿ ಸವಾರ ನಾಗಯ್ಯ ಜೀವಬಿಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಟಿಪ್ಪರ್‌ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು