ನೋಯ್ಡಾ: ಹೆದ್ದಾರಿಯಲ್ಲಿ ಖಾಸಗಿ ವ್ಯಕ್ತಿಗಳ ಬೆಂಗಾವಲು ವಾಹನಗಳ ಕಿಟಕಿಯಲ್ಲಿ ಕುಳಿತು ಅಪಾರ ಪ್ರಮಾಣದ ನೋಟು ಗಳನ್ನು ರಸ್ತೆಗೆ ಎಸೆದ ಘಟನೆ ದೆಹಲಿಯ ನೋಯ್ಡಾ ಬಳಿ ನಡೆದಿದೆ.
ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ವಾಹನಗಳ ನಿಲ್ಲಿಸಿ ನೋಟು ಸಂಗ್ರಹಿಸಲು ಮುಂದಾಗಿದ್ದಾರೆ. ಇದರಿಂದ ಹೆದ್ದಾರಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಟ್ರಾಫಿಕ್ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ.
ಕಾರಿನ ಕಿಟಕಿಯಲ್ಲಿ ಕುಳಿತು ಪ್ರಯಾಣಿಸುವುದು ಟ್ರಾಫಿಕ್ ನಿಯಮ ಉಲ್ಲಂಘನೆ, ನೋಟುಗಳನ್ನು ರಸ್ತೆಗೆ ಎಸೆದು ವಿಕೃತಿ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.