News Karnataka Kannada
Friday, May 03 2024
ಕ್ರೈಮ್

ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಪ್ರಕರಣ: ಇಬ್ಬರು ಅರೆಸ್ಟ್

Two arrested for taking video of girls changing clothes
Photo Credit : News Kannada

ಕೋಲಾರ: ಪ್ರಮುಖ ಬೆಳವಣಿಗೆಯೊಂದರಲ್ಲಿ ವಸತಿ ಶಾಲೆ ಮಕ್ಕಳನ್ನ ಮಲದ ಗುಂಡಿ ಸ್ವಚ್ಚಗೊಳಿಸಲು ಇಳಿಸಿದ್ದು ಹಾಗೂ ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆಲ್ವರ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಒಬ್ಬರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಇಬ್ಬರನ್ನ ಬಂಧಿಸಿರುವ ಪೊಲೀಸರು ಇನ್ನೂ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಪ್ರಿನ್ಸಿಪಾಲ್ ಅರೆಸ್ಟ್: ಮಾಲೂರಿನ ಯಲವಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ, ಬಾಲಕಿಯರ ಕೊಠಡಿಯಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಹಾಗೂ ಮಲಗಿದ್ದ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣವೂ ಬೆಳಕಿಗೆ ಬಂದಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕ್ರೈಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ನವೀನ ಕುಮಾರ್ ರಾಜು, ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಮುನಿಯಪ್ಪ, ವಾರ್ಡನ್ ಮಂಜುನಾಥ್‌ನನ್ನು ಅಮಾನತ್ತು ಮಾಡಲಾಗಿದೆ. ವಿದ್ಯಾರ್ಥಿನಿಯ ಖಾಸಗಿ ವೀಡಿಯೋಗಳ ಬಗ್ಗೆ ಗಮನಕ್ಕೆ ಬಂದಿದೆ. ಕೂಡಲೇ ಇದರ ಹಿಂದೆ ಇರುವ ಜಾಲದ ಕುರಿತು ಪರಿಶೀಲನೆ ಮಾಡಲಾಗುವುದು. ಪೊಲೀಸ್ ಇಲಾಖೆ ಈಗಾಗಲೇ ಪ್ರಕರಣ ದಾಖಲು ಮಾಡಿಕೊಂಡಿದೆ. ಇಲ್ಲಿರುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡಲಾಗುವುದು. ಮಕ್ಕಳು ಮತ್ತು ಪೋಷಕರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಪೋಷಕರು ನವೀನ್ ಕುಮಾರ್ ರಾಜು ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೇ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲ ಗುಂಡಿಗೆ ಇಳಿಸಿದ ವಿಚಾರವಾಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದಾಖಲಿಸಿದ ದೂರಿನಡಿ 4 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಪ್ರಾಂಶುಪಾಲೆ ಭಾರತಮ್ಮ ಮತ್ತು ಸಹ ಶಿಕ್ಷಕ ಮುನಿಯಪ್ಪನನ್ನು ಮಾಸ್ತಿ ಪೊಲೀಸರು ಬಂಧಿಸಿದ್ದಾರೆ. ವಾರ್ಡನ್ ಮಂಜುನಾಥ್ ಹಾಗೂ ಅತಿಥಿ ಶಿಕ್ಷಕ ಅಭಿಷೇಕ್ ಪರಾರಿಯಾಗಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು