News Karnataka Kannada
Tuesday, April 30 2024
ಕ್ರೈಮ್

ಮೀನುಗಾರಿಕೆಗೆ ತೆರಳಿದ್ದ ವೇಳೆ ಘೋರ ದುರಂತ: ಇಬ್ಬರು ಮೀನುಗಾರರು ಸಮುದ್ರ ಪಾಲು

Two fishermen drown as they go fishing in a tragic accident
Photo Credit : News Kannada

ಬೈಂದೂರು: ಬೈಂದೂರು ಶಿರೂರಿನಲ್ಲಿ ಭಾರಿ ದುರಂತವೊಂದು ನಡೆದುಹೋಗಿದೆ. ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ಭಾನುವಾರ ರಾತ್ರಿ 10 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ 3 ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಸೋಮುವಾರ ಮುಂಜಾವು 1ಕ್ಕೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ, ಅಬ್ಸುಲ್ ಸತ್ತರ್ (45 )ಹಡವಿನಕೋಣೆ, ಶಿರೂರು ಮಿಸ್ಬಾ ಯೂಸುಫ್ (48) ಕುದ್ವಾಯಿ ರೋಡ್, ಭಟ್ಕಳ ಮೃತಪಟ್ಟಿದ್ದಾರೆ.

ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ( 37) ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ‌ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು