ಧಾರವಾಡ: ಚಲಿಸುತ್ತಿದ್ದ ಬಸ್ ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯ ಬಳಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.