ರಾಮನಗರ: ರಾಮನಗರ ಬಳಿ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರಾಜೇಶ್(42), ಉಮಾ(35) ಸ್ಥಳದಲ್ಲೇ ಸಾವು.
ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು ಮಕ್ಕಳು ಸೇರಿ ನಾಲ್ವರಿಗೆ ಗಾಯಗಳಾಗಿವೆ. ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಲಾರಿ ಈ ವೇಳೆ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿಯಾಗಿದೆ.
ಅಪಘಾತ ಹಿನ್ನಲೆಯಲ್ಲಿ ಕೆಲಕಾಲ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ರಾಮನಗರ ಸಂಚಾರಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.